ಕೊಪ್ಪಳ: ಅಂಜನಾದ್ರಿಯಲ್ಲಿ ಪೂಜೆ ಹಾಗೂ ಹುಂಡಿ ವಿವಾದದ ಹಿನ್ನಲೆಯಲ್ಲಿ ಆ.11 ರಂದು ಕೊಪ್ಪಳ ಜಿಲ್ಲಾಧಿಕಾರಿಗಳು ಸುಪ್ರೀಂ ಕೋರ್ಟಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಗಂಗಾವತಿ ತಾಲೂಕಿನ ಅಂಜನಾದ್ರಿಯು ಆಂಜನೇಯನ ಜನ್ಮ ಸ್ಥಳವಾಗಿದೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿಂದ ಪೂಜಾ ಕಾರ್ಯ ಮಾಡಲು ವಿದ್ಯಾದಾಸ ಬಾಬಾರಿಗೆ ಅವಕಾಶ ನೀಡಲಾಗಿತ್ತು. ಅಂಜನಾದ್ರಿಯ ಕಾರ್ಯನಿರ್ವಾಹಣಾಧಿಕಾರಿಗಳು ದೇವಸ್ಥಾನದ ಗರ್ಭ ಗುಡಿ ಭಾಗದಲ್ಲಿ ಹುಂಡಿಗಳನ್ನು ಇಟ್ಟಿರುವ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ನೀಡಿಲ್ಲ ಎಂದು ವಿದ್ಯಾದಾಸ ಬಾಬಾ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ವಿವಾದದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಅಹವಾಲು ದಾಖಲಿಸಲು ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ. ಆ 11 ರಂದು ಆನ್ ಲೈನ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.



















