ಧರ್ಮಸ್ಥಳ : ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮೂವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಖಾಸಗಿ ವಾಹನಿಯ ಹರೀಶ್ ಎಂಬುವವರು ದೂರು ನೀಡಿದ ಹಿನ್ನೆಲೆಯಲ್ಲಿ ಹಲವು ಸೆಕ್ಷನ್ ಗಳಡಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್ ಮಟ್ಟಣನವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), ಜಯಂತ್(ಎ4) ಸೇರಿದಂತೆ ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಾನು ಹಲ್ಲೆಗೆ ಒಳಗಾದವರನ್ನು ಮಾತನಾಡಿಸಲು ಹೋಗಿದ್ದೆ. ಆಗ ಗಿರೀಶ್ ಮಟ್ಟಣವರ್ ಬಳಿ ಬೈಟ್ ಕೊಡುವಂತೆ ಕೇಳಿದಾಗ ನನ್ನನ್ನು ಬೈಯಲು ಆರಂಭಿಸಿದರು. ಆಗ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ.



















