ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದೆ.
ಸರ್ಕಾರ ಅಧಿಕಾರಿಗಳ ಅಮಾನತು ಹಿಂಪಡೆದ ಹಿನ್ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಗೊಳಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ. ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ನ್ಯಾಯಪೀಠ ಅರ್ಜಿ ಇತ್ಯರ್ಥಗೊಳಿಸಿದೆ.
 
                                 
			 
			
 
                                 
                                


















