ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಕಾಡಾನೆ ಆತಂಕ ಮುಂದುವರೆದಿದೆ. ಚಿಕ್ಕಮಗಳೂರು – ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕಾಡಾನೆಗಳು ಸಂಚಾರ ಮಾಡುತ್ತಿದ್ದು, ವಾಹನ ಸವಾರರು ಆತಂಕದಲ್ಲೇ ಸಂಚಾರ ಮಾಡುವಂತಾಗಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಬಸರವಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿದ್ದು, ರಸ್ತೆ ಪಕ್ಕದಲ್ಲೇ ಬೀಡುಬಿಟ್ಟಿವೆ.
ಈ ಮಾರ್ಗದಲ್ಲಿ ನಿತ್ಯವೂ ಸಾವಿರಾರು ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತವೆ ಹಾಗಾಗಿ, ಕಾಡಾನೆಗಳ ಸೆರೆ ಹಿಡಿಯುವಂತೆ ಅಥವಾ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರ ಅರಣ್ಯಾಧಿಕಾರಿಗಳ ಒತ್ತಾಯಿಸಿದ್ದಾರೆ. ಅರಣ್ಯಾಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಆಕ್ರೋಶ ಹೊರಹಾಕಿದ್ದಾರೆ.



















