ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರಿನ ಗಂಗಾನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿದ್ದಾರೆ.
ಕಬಡ್ಡಿ ಪಂದ್ಯಾವಳಿಯಲ್ಲಿ ಶಾಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ತಂಡಗಳೆರಡೂ ಪ್ರಥಮ ಸ್ಥಾನ ಗಳಿಸಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕಿ ಅಮೀನಾ ಕೆ, ಎಸ್ ಡಿಎಂಸಿ ಅಧ್ಯಕ್ಷರಾದ ವಿಜಯಶ್ರೀ, ದೈಹಿಕ ಶಿಕ್ಷಕರಾದ ರೋಹಿಣಿ, ಕ್ರೀಡಾ ಮ್ಯಾನೇಜರ್ ಷಣ್ಮುಖ್ ಸೇರಿದಂತೆ ಪಾಲಕರು, ಶಿಕ್ಷಕ ಸಿಬ್ಬಂದಿ ಹಾಗೂ ಎಸ್ ಡಿಎಂಸಿ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



















