ಬೆಂಗಳೂರು: ದೇಶದಲ್ಲೇ ಬೃಹತ್ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Recruitment 2025) ನಲ್ಲಿ ಖಾಲಿ ಇರುವ 5,180 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆ: 5,180
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 26
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 20ರಿಂದ ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಪಿಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 24,050 ರೂಪಾಯಿಯಿಂದ 64,480 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕವೇ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರ ಜತೆಗೆ ಸ್ಥಳೀಯ ಭಾಷೆಯ ಪ್ರಾವೀಣ್ಯತೆ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು https://sbi.co.in/ ಗೆ ಭೇಟಿ ನೀಡಬಹುದು.