ನವ ದೆಹಲಿ : ಕಳೆದ ಹತ್ತು ವರ್ಷಗಳಲ್ಲಿ ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಪ್ರಯತ್ನಗಳನ್ನು ಮಾಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಸಂಸ್ಕೃತ ಭಾಷೆಯ ದಿನದ ಅಂಗವಾಗಿ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ನಮೋ, ಸಂಸ್ಕೃತ ಜ್ಞಾನ ಮತ್ತು ಅಭಿವ್ಯಕ್ತಿಯ ಶಾಶ್ವತ ಮೂಲವಾಗಿದ್ದು, ಅದರ ಪ್ರಭಾವವನ್ನು ಪ್ರತಿಯೊಂದು ಕ್ಷೇತ್ರದಲ್ಲೂ ಕಾಣಬಹುದು ಎಂದು ಹೇಳಿದ್ದಾರೆ.
ಭಾಷೆಯನ್ನು ಕಲಿಯಲು ಮತ್ತು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿರುವ ಪ್ರತಿಯೊಬ್ಬರ ಪ್ರಯತ್ನವನ್ನು ಶ್ಲಾಘಿಸುವ ಸಂದರ್ಭವಿದು. ಈ ದಿನವನ್ನು ವಾರ್ಷಿಕವಾಗಿ ʼಶ್ರಾವಣ ಪೂರ್ಣಿಮೆʼಯ ಶುಭ ದಿನದಂದು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.


















