ಶಿವಮೊಗ್ಗ: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 2ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಭಾನುವಾರದ ಹಿನ್ನೆಲೆಯಲ್ಲಿ ಗ್ಯಾರೇಜ್ ಬಂದ್ ಮಾಡಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗ್ಯಾರೇಜ್ ಬಂದ್ ಆಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ ಡಸ್ಟರ್, ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಲ್ಲದೇ, ಟಾಟಾ ಸುಮೋ ವಾಹನ ಅರ್ಧದಷ್ಟು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗ್ಯಾರೇಜ್ ಮಾಲೀಕರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















