ಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಿದೆ.
ಈ ನಡುವೆ ಆರ್.ಸಿ.ಬಿ ವಿಜೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಿಜೆಪಿ – ಜೆಡಿಎಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿರುವುದು “60%” ಸರ್ಕಾರ. 11 ಜನರ ಸಾವಿಗೆ ಕಾಂಗ್ರೆಸ್ ಸರ್ಕಾರ ನೇರ ಕಾರಣವಾಗಿದೆ. ಸಾವಿಗೆ ಕಾರಣ ಕೇಳಲು ನಾವು ಸದನದ ಒಳಗೆ – ಹೊರಗೆ ಹೋರಾಟ ಮಾಡುತ್ತೇವೆ ಎಂದು ಕಾಂಗ್ರೇಸ್ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ . ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಿಟಿ ರವಿ, ಡಾ. ಸಿ.ಎನ್. ಅಶ್ವಥ್ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಜೆಡಿಎಸ್ ಶಾಸಕ ಎ. ಮಂಜು, ಶಾಸಕ ಚನ್ನಬಸಪ್ಪ ಸೇರಿ ಬಿಜೆಪಿ, ಜೆಡಿಎಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.


















