ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ರಾಜಣ್ಣ ಅವರು ಇಂದು(ಸೋಮವಾರ) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಅನಂತರ ಸ್ವಪಕ್ಷದ ನಾಯಕರ ವಿರುದ್ಧವೇ ಹನಿಟ್ರ್ಯಾಪ್ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ವೇಳೆ ಸ್ವಪಕ್ಷದವರೇ ಕಿತ್ತಾಟ ನಡೆಸಿದ್ದರು.
ಆದರೆ, ಇಂದು ಮುಂಗಾರು ಅಧಿವೇಶನ ಆರಂಭವಾದ ಮೊದಲ ದಿನವೇ ತಮ್ಮ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಹೈಕಮಾಂಡ್ ನಿರ್ದೇಶನದಂತೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಕಚೇರಿಯಿಂದಲೇ ರಾಜ್ಯಪಾಲರಿಗೆ ಉಚ್ಛಾಟನೆ ಪತ್ರ ರವಾನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜಕೀಯ ಇತಿಹಾಸದಲ್ಲೇ ಈ ರೀತಿಯ ಪ್ರಕರಣ ಮೊದಲನೇಯದಾಗಿದೆ ಎನ್ನಲಾಗಿದೆ.
ಕಲಾಪವನ್ನು ಉದ್ದೇಶಿಸಿ ಮಾತನಾಡಿದ ರಾಜಣ್ಣ, ಸಂಸದೀಯ ಸಚಿವರು ಸಿಎಂ ಸಿದ್ದರಾಮಯ್ಯ ಅವರೇ ಕಲಾಪಕ್ಕೆ ತಿಳಿಸುತ್ತಾರೆ ಎನ್ನುವುದನ್ನು ಹೇಳಿರುವುದಾಗಿ ಪ್ರಸ್ತಾಪಿಸಿದ್ದಾರೆ.