ರಾಯಚೂರು : ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.

ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿಯಾಗಿದೆ. ಇನ್ನು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋವುಗಳನ್ನು ಸಿಬ್ಬಂದಿ ಹೊರಗೆ ಬಿಟ್ಟಿದ್ದಾರೆ.
ಸ್ಥಳಕ್ಕೆ ಆಂಧ್ರಪ್ರದೇಶದ ಎಮ್ಮಿಗನೂರು ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.