ಬೆಂಗಳೂರು: ದೇಶದ ವಾಯುಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ವೈ ಮೆಡಿಕಲ್ ಅಸಿಸ್ಟಂಟ್ (IAF Group Y Recruitment 2025) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರ ಹುದ್ದೆ ಪಡೆಯಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 04
ವಾಯುಪಡೆಯಲ್ಲಿ ಏರ್ ಮೆನ್ ಗ್ರೂಪ್ ವೈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ, ಡಿಪ್ಲೋಮಾ ಹಾಗೂ ಫಾರ್ಮಸಿಯಲ್ಲಿ ಬಿಎಸ್ಸಿ ಪದವಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಿದೆ. ಆಗಸ್ಟ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 14,600 ರೂಪಾಯಿಂದ 26,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಇದರ ಜತೆಗೆ ಡಿಎ, ಟಿಎ, ಎಲ್ ಟಿಎ, ಎಚ್ ಆರ್ ಎ ಭತ್ಯೆಗಳನ್ನು ಕೂಡ ನೀಡಲಾಗುತ್ತದೆ ಎಂದು ವಾಯುಪಡೆ ಮಾಹಿತಿ ನೀಡಿದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ, ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು https://airmenselection.cdac.in/CASB/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.