ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನೂ ಮೂರು ದಿನಗಳ ಕಾಲ ನಡೆಯಲಿರುವ ಪ್ರತಿಭಟನೆಗೆ, ರಾಜ್ಯದ ಮೂಲೆ ಮೂಲೆಗಳಿಂದ 500ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಆಗಮಿಸಿ ಪಾಲ್ಗೊಂಡಿದ್ದಾರೆ.
ಏಳು ತಿಂಗಳಾದರು ಆದೇಶ ಮಾಡಿಲ್ಲ. ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. “ಕಾಂಗ್ರೆಸ್ ಸರ್ಕಾರ ಕೈ ಕೊಟ್ಟ ಸರ್ಕಾರ” ಎಂದು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
“ಆಶಾ ಕಾರ್ಯಕರ್ತೆಯ ಬೇಡಿಕೆಗಳು”
- ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತಗ್ತು ಕೇಂದ್ರದ ಭಾಗಶಃ ಗೌರವಧನ ಸೇರಿಸಿ ಮಾಸಿಕ ರೂ.10,000 ಗೌರವಧನ ಈ ಏಪ್ರಿಲ್‌ನಿಂದಲೇ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.
- 2025 ಮುಖ್ಯಮಂತ್ರಿ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1,000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
- ಜನಸಂಖ್ಯೆ ಹೆಚ್ಚಿಸಿ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
- ಅವೈಜ್ಞಾನಿಕ ಆಶಾ ಪರ್ಫಾಮೆನ್ಸ್ ಆಪ್ರೈಸಲ್ ಕೈಬಿಡಬೇಕು.
- ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.
- ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
- 2025ರಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಆಶಾ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು.


















