ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಕೂಡ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪವನ್ನು ಮುಂದೂಡುವ ಪ್ರಸಂಗ ಎದುರಾಯಿತು.
ಮತಗಳವು, ಬಿಹಾರದ ಎಸ್‌ಐಆರ್ ವಿರೋಧಿಸಿ ಸಂಸತ್ ಭವನದ ಸಂಕೀರ್ಣದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದರು.
ಬಿಹಾರ ಮತದಾರರ ಪಟ್ಟಿಯಲ್ಲಿದ್ದಾರೆ ಎನ್ನಲಾದ 124 ವರ್ಷ ವಯಸ್ಸಿನ ಮತದಾರ ಮಹಿಳೆಯ ಹೆಸರು ಹೊಂದಿರುವ ಬಿಳಿ ಟಿ-ಶರ್ಟ್‌ಗನ್ನು ಧರಿಸಿ ಪ್ರತಿಪಕ್ಷಗಳು ಸಂಸದರು, ಪ್ರತಿಭಟನೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್‌ಸಿಪಿಯ ಸುಪ್ರಿಯಾ ಸುಳೆ, ಟಿಎಂಸಿಯ ಒಬ್ರೇನ್, ಡಿಎಂಕೆಯ ಟಾರ್ ಬಾಲು, ಎಡ ಪಕ್ಷಗಳ ಇತರ ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿ ಪ್ರತಿಭಟನೆ ಮಾಡಿದರು.
ರಾಜೀವ್ ಕುಮಾರ್ ಮತ್ತು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಬಿಜೆಪಿಯ ಇಲಾಖೆಯಾಗಿದೆ ಎಂದು ಕಾಂಗ್ರೆಸ್‌ನ ಮಾಣಿಕಮ್ ಟ್ಯಾಗೋರ್ ಆರೋಪಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗಾಗಿ 3 ಸಾವಿರ ಮತ ಖರೀದಿಸಲಾಗಿತ್ತು ಎಂಬ ಸಿಎಂ ಇಬ್ರಾಹಿಂ ಹೇಳಿಕೆ ಆಧರಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸಭಾ ಬಿಜೆಪಿ ಸಂಸದ ಲೇಹರ್ ಸಿಂಗ್ ದೂರು ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್ʼ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಪ್ರಸನ್ನಾ ಎಂಬ ಮಹಿಳೆಯೊಬ್ಬರು ತಮ್ಮ ವಿಳಾಸ ಬಳಸಿಕೊಂಡು ತಮಗೆ ತಿಳಿಯದೇ 9 ನಕಲಿ ಮತಗಳನ್ನು ನೋಂದಾಯಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಇವೆಲ್ಲಾ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಚುನಾವಣಾ ಆಯೋಗದ ವಿರುದ್ಧ ಆರೋಪಿಸಿರುವ ಮತ ಕಳ್ಳತನದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಪುಷ್ಠಿ ನೀಡಿದಂತಾಗಿದೆ.