ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ರಸಗೊಬ್ಬರಕ್ಕಾಗಿ ರೈತರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಇದೇ ವಿಷಯ ವಿಧಾನಸಭೆಯಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.
ಬುಧವಾರ ರಸಗೊಬ್ಬರ ವಿಷಯವಾಗಿ ಸಚಿವರು ನೀಡಿದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಸಮರ್ಪಕ ರಸಗೊಬ್ಬರ ವಿತರಣೆ ಮಾಡಿದರೂ ರಾಜ್ಯ ಸರ್ಕಾರ ಮಾತ್ರ ಕೇಂದ್ರದ ವಿರುದ್ಧ ಆರೋಪ ಮಾಡುವ ಆತುರದಲ್ಲಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



















