ಬೆಂಗಳೂರು: ನೀವು ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಸೆಕ್ಯೂರ್ ಆಗಿರೋ ಜಾಬ್ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಸಹಿ ಸುದ್ದಿ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (Hindustan Copper Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 27 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್
ಒಟ್ಟು ಹುದ್ದೆ: 27
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 2
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ಸಂಸ್ಥೆಯಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೈನಿಂಗ್, ಸಿಸ್ಟಂ, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪದವಿ, ಬಿ.ಇ, ಬಿ.ಟೆಕ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಂಬಿಎ, ಎಂಸಿಎ ಸೇರಿ ಯಾವುದಾದರೂ ಒಂದು ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು hindustancopper.com ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.



















