ಶಿವಮೊಗ್ಗ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಿಗೆ ಭಾರತ ಮಾತೆಯ ಅಲಂಕಾರ ಮಾಡಲಾಗಿದೆ.
ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಇರುವ ಸಿಗಂದೂರು ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಧ್ವಜಾರೋಹಣದ ಸಂದರ್ಭದಲ್ಲಿ ನೂರಾರು ಭಕ್ತರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.