ಹುಬ್ಬಳ್ಳಿ: ಆರೆಸ್ಸೆಸ್ ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುನನ್ನು ಹೀರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆರೆಸ್ಸೆಸ್ ಗೆ ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನಾರ್ಹ ಭಾಷಣ ಮಾಡಿರುವುದಕ್ಕೆ ಕಾಂಗ್ರೆಸ್ ಈ ರೀತಿ ಮಾತನಾಡುತ್ತಿದೆ. ಇದರಿಂದಾಗಿ ಕಾಂಗ್ರೆಸ್‌ಗೆ ಇರಿಸು ಮುರುಸಾಗಿದೆ.
ಸ್ವಾತಂತ್ರ್ಯ ಹೋರಾಟದ ಸಂಪೂರ್ಣ ಲಾಭವನ್ನು ಕಾಂಗ್ರೆಸ್ ಪಡೆಯಲು ಪಯತ್ನಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ನಿಜವಾದ ಹೋರಾಟ ಮಾಡಿದವರು ಅನಾಮಧೇಯ ವ್ಯಕ್ತಿಗಳು. ಹಲವಾರು ಸ್ವತಂತ್ರ ಸೇನಾನಿಗಳು ತಮ್ಮ ಪ್ರಾಣ ತ್ಯಾಗ ಮಾಡಿರುವುವುದು ಎಲ್ಲರಿಗೂ ಗೊತ್ತಿರುವ ಸತ್ಯ. ರೈತರು, ಕೂಲಿಕಾರರು, ಎಲ್ಲ ವರ್ಗದ ಜನರು ಒಗ್ಗಟ್ಟಾಗಿ ಸ್ವಾತಂತ್ರಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ.
ಆದರೆ, ಅದರ ಶ್ರೇಯಸ್ಸನ್ನು ಕಾಂಗ್ರೆಸ್ ನವರು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಎಂದು ಆರೋಪಿಸಿದ್ದಾರೆ.



















