ಮೈಸೂರು : ಸಚಿವ ಸ್ಥಾನದಿಂದ ಕೆ. ಎನ್ ರಾಜಣ್ಣ ವಜಾಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆದಿದೆ.
ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ದಿಕ್ಕಾರ ಕೂಗುವುದರ ಮೂಲಕ ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿ ಕಾರಿದರು.
ವಾಲ್ಮೀಕಿ ಸಮುದಾಯದ ಮುಖಂಡರು, ನಾಗೇಂದ್ರ, ರಾಜಣ್ಣರನ್ನು ವಾಪಸ್ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.



















