ಕೊಪ್ಪಳ: ಸಾರಿಗೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.
ಸರ್ಕಾರಿ ಬಸ್ಸೊಂದು ಹುಳ್ಕಿಹಾಳದಿಂದ ಸಿದ್ದಾಪುರಕ್ಕೆ ತೆರಳುತ್ತಿದ್ದ ವೇಳೆ ಹಳ್ಳದ ಬ್ರಿಡ್ಜ್ ನಲ್ಲಿ ಸಿಲುಕಿದೆ. ಸ್ವಲ್ಪ ತಪ್ಪಿದರೂ ಹಳ್ಳಕ್ಕೆ ಬೀಳುತ್ತಿದ್ದ ಬಸ್ ಅನ್ನು ಚಾಲಕ ಮತ್ತು ನಿರ್ವಾಹಕರು ಜೆಸಿಬಿಯ ಸಹಾಯದಿಂದ ಹೊರತೆಗೆದಿದ್ದಾರೆ.
ರಸ್ತೆ ಕಾಮಗಾರಿ ನಡೆದ ಹಿನ್ನೆಲೆ ಗುತ್ತಿಗೆದಾರರು ಪರ್ಯಾಯ ರಸ್ತೆ ಮಾಡಿದ್ದರು. ಆದರೆ ನಿರಂತರ ಮಳೆಯಿಂದ ಬ್ರಿಡ್ಜ್ ಮಣ್ಣು ಕೊಚ್ಚಿಕೊಂಡು ಹೋಗಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ಅದೃಷ್ಟವಶಾತ್ ಪ್ರಯಾಣಿಕರಿಲ್ಲದೆ ಖಾಲಿ ಬಸ್ ಮಾತ್ರ ಹಿಂದಿರುಗುವಾಗ ಈ ಘಟನೆ ನಡೆದಿರುವುದರಿಂದ ಭಾರಿ ಅನಾಹುತವೊಂದು ತಪ್ಪಿದೆ. ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.