ಬೆಂಗಳೂರು: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಬ್ಯಾಂಕಿನ ಬ್ರ್ಯಾಂಚ್ ಗಳಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ (Punjab and Sind Bank Recruitment 2025) ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
ಹುದ್ದೆಗಳ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ
ಒಟ್ಟು ಹುದ್ದೆಗಳು: 750
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಸೆಪ್ಟೆಂಬರ್ 4
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 48,480-85,920 ರೂಪಾಯಿ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಪರೀಕ್ಷೆ, ವೈಯಕ್ತಿಕ ಸಂದರ್ಶನ, ಅಂತಿಮ ಮೆರಿಟ್ ಪಟ್ಟಿ ಹಾಗೂ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://punjabandsindbank.co.in/ ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.



















