ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (HAL India Recruitment 2025) ಖಾಲಿ ಇರುವ 02 ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಅದರಲ್ಲೂ, ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಭಾರಿ ಅನುಕೂಲವಾಗಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 30
ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ Dy. General Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore-560017 ವಿಳಾಸಕ್ಕೆ ಕಳುಹಿಸಬೇಕು.



















