ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) – ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ಐಐಸಿಟಿ) ಸಂಸ್ಥೆಯಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ (AFMS Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಹುದ್ದೆ ಹುಡುಕುತ್ತಿರುವವರಿಗೆ ಇದು ಶುಭ ಸುದ್ದಿಯಾಗಿದೆ. ಆನ್ ಲೈನ್ ಮೂಲಕ ಸೆಪ್ಟೆಂಬರ್ 12ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜೂನಿಯರ್ ಸ್ಟೆನೋಗ್ರಾಫರ್ ಹಾಗೂ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಪಾಸಾಗಿರಬೇಕು. ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು ಎಂದು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಂಸ್ಥೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ಐಐಸಿಟಿ)
ಒಟ್ಟು ಹುದ್ದೆಗಳು: 09
ಉದ್ಯೋಗ ಸ್ಥಳ: ಹೈದರಾಬಾದ್, ತೆಲಂಗಾಣ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 12
ಕನಿಷ್ಠ 25ರಿಂದ ಗರಿಷ್ಠ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 81,100 ರೂಪಾಯಿ ಸಂಬಳ ನೀಡಲಾಗುತ್ತದೆ. ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 56,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು https://iict.res.in/recruit/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















