ಬೆಳ್ತಂಗಡಿ : ರಾಜ್ಯ, ದೇಶ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ, ಧರ್ಮಸ್ಥಳದಲ್ಲಿ ಅಸಹಜ ಸಾವಿಗೀಡಾದ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಕೋರ್ಟ್ ಮುಂದೆ ಬುರುಡೆ ಸಮೇತ ಹಾಜರಾಗಿದ್ದ ದೂರುದಾರ (ಸಿ.ಎನ್.ಚಿನ್ನಯ್ಯ) ನನ್ನು ಇಂದು (ಶನಿವಾರ, ಆ.23) ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ನಂತರ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಶುಕ್ರವಾರ (ಆ.22) ದೂರುದಾರ ಮತ್ತು ಈ ಹಿಂದೆ ಅನಾಥ ಶವಗಳ -ಪೋಸ್ಟ್ ಮಾರ್ಟಂ ಮಾಡಿದ್ದ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಇಂದು ಪ್ರಮುಖ ಸಾಕ್ಷಿ ದೂರುದಾರ ಮುಸುಕುದಾರಿಯನ್ನು ಬಂಧಿಸಿದ್ದಾರೆ.


















