ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ದೂರುದಾರನನ್ನೇ ಬಂಧಿಸಿದ್ದಾರೆ.
ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.
ಈ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ.


















