ನಟ ದರ್ನಶನ್ ‘ದಿ ಡೆವಿಲ್’ (The Devil) ಸಿನಿಮಾದ ಕಾರ್ಯ ಮುಗಿಸಿದ್ದಾರೆ. ಈಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ (Darshan) ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಈಗ ಈ ಚಿತ್ರದ ರಿಲೀಸ್ ದಿನಾಂಕ (The Devil Movie Release Date) ಪ್ರಕಟಿಸಲಾಗಿದೆ. ಇದೇ ವರ್ಷ ಈ ಸಿನಿಮಾ ಬಿಡುಗಡೆ ಆಗಲಿದೆ. ಡಿಸೆಂಬರ್ 12ರಂದು ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ.

ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ದರ್ಶನ್ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ದಿ ಡೆವಿಲ್’ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಜೈಲಿನಲ್ಲಿ ಇರುವ ಅವರ ಖಾತೆಯನ್ನು ಈಗ ಪತ್ನಿ ವಿಜಯಲಕ್ಷ್ಮಿ ಅವರು ನಿಭಾಯಿಸುತ್ತಿದ್ದಾರೆ. ‘ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ ದಿ ಡೆವಿಲ್ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ’ ಎಂದು ಪೋಸ್ಟ್ ಮಾಡಲಾಗಿದೆ.



















