ವಿಜಯಪುರ: ನ್ಯಾಯಾಧೀಶರ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ.
ವಿಜಯಪುರ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಸಚಿನ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ಜಿಲ್ಲೆಯ ಮುದ್ದೇಬಿಹಾಳ (Muddebihal) ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ನ್ಯಾ.ಸಚಿನ್ ಕೌಶಿಕ್ ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ, ನ್ಯಾಯಾಧೀಶರ ಮನೆಗೆ ಕನ್ನ ಹಾಕಿರುವ ಖದೀಮರು, ಹಲವು ವಸ್ತುಗಳನ್ನು ದೋಚಿ ಹೋಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















