ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL Recruitment 2025) ಕಂಪನಿಯಲ್ಲಿ 99 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜ್ ಮೆಂಟ್ ಹಾಗೂ ಡಿಪ್ಲೋಮಾ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಂದು ಅಥವಾ ಅದಕ್ಕೂ ಮೊದಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು : ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( UCIL )
ಖಾಲಿ ಹುದ್ದೆಗಳ ಸಂಖ್ಯೆ: 99
ಹುದ್ದೆಯ ಸ್ಥಳ: ಜಾರ್ಖಂಡ್
ಹುದ್ದೆಯ ಹೆಸರು: ಮ್ಯಾನೇಜ್ ಮೆಂಟ್ ಆ್ಯಂಡ್ ಡಿಪ್ಲೋಮಾ ಟ್ರೈನಿ
ಸ್ಟೈಪೆಂಡ್: ಮಾಸಿಕ 29,990-40,000 ರೂಪಾಯಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆ.24
ಪದವಿ, ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂಬಿಎ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 5 ವರ್ಷಗಳ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಗೇಟ್ 2025 ಅಂಕಗಳು ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ucil.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ನಲ್ಲೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 ಕೊನೆಯ ದಿನವಾಗಿದೆ.



















