ಬೆಂಗಳೂರು: ಕೇಂದ್ರ ಸರ್ಕಾರವು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ದೀನದಯಾಳ್ ಸ್ಪರ್ಶ್ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನ ನೀಡಲು ಈಗ ಅರ್ಜಿಗಳನ್ನು ಆಹ್ವಾನಿಸಿದೆ. 6ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಯೋಜನೆಗೆ (Deen Dayal SPARSH Scholarship Yojana) ಅರ್ಜಿ ಸಲ್ಲಿಸುವ ಮೂಲಕ ಸ್ಕಾಲರ್ ಶಿಪ್ ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರದ ಅಂಚೆ ಇಲಾಖೆಯು ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಅಂಚೆಚೀಟಿ ಸಂಗ್ರಹಣೆಯ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ಅದನ್ನು ಶಿಕ್ಷಣದೊಂದಿಗೆ ಸಂಯೋಜಿಸುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 500 ರೂಪಾಯಿಯಂತೆ (ವಾರ್ಷಿಕ 6 ಸಾವಿರ ರೂಪಾಯಿ) ತ್ರೈಮಾಸಿಕ ಆಧಾರದ ಮೇಲೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
6ನೇ ತರಗತಿಯಿಂದ 10ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದ್ದು, ವಿದ್ಯಾರ್ಥಿಗಳನ್ನು ಒಂದು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಇತಿಹಾಸ, ವಿಜ್ಞಾನ, ಸಮಾಜ ವಿಜ್ಞಾನ, ಕ್ರೀಡೆ ಮತ್ತು ಸಾಮಾನ್ಯ ಜ್ಞಾನದಂತಹ ವಿಷಯಗಳನ್ನು ಒಳಗೊಂಡಿರುತ್ತದೆ. ದೇಶಾದ್ಯಂತ ಒಟ್ಟು 40 ವಿದ್ಯಾರ್ಥಿಗಳನ್ನು (ಪ್ರತಿ ಅಂಚೆ ವಲಯದಿಂದ ಇಬ್ಬರು) ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಸ್ಕಾಲರ್ ಶಿಪ್ ಪಡೆಯಲು ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ www.indiapost.gov.in ಗೆ ಭೇಟಿ ನೀಡಬೇಕು. ಈ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆ, ನಿಖರವಾದ ಅರ್ಹತಾ ನಿಯಮಗಳು, ಅಗತ್ಯವಿರುವ ದಾಖಲೆಗಳ ಪಟ್ಟಿ ಮತ್ತು ಇತರ ಮುಖ್ಯ ಮಾಹಿತಿಯನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್ ಲೈನ್ ಮೂಲಕವೇ ನಡೆಯುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು
– ವಿದ್ಯಾರ್ಥಿಯು 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಾಗಿರಬೇಕು.
– 2025ರ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು.
– ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆ ಹೊಂದಿರಬೇಕು.
– ಕ್ಲಬ್ ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಅನುಸರಿಸುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ 6,000 ವಿದ್ಯಾರ್ಥಿವೇತನ ನೀಡಲಾಗುತ್ತದೆ.



















