ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ತಾಯಿ ಸುಜಾತ ಭಟ್ ನಾಲ್ಕನೇ ದಿನದ ವಿಚಾರಣೆಗಾಗಿ ಆ.29 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಆಟೋದಲ್ಲಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.
ಇನ್ನೊಂದೆಡೆ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಆ.29 ರ ಬೆಳಗ್ಗೆ 11:35 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಸುಜಾತ ಭಟ್ ವಿಚಾರಣೆಯನ್ನು ಮಾಡಲು ಪ್ರಣವ್ ಮೊಹಂತಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.



















