ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಬೇಕು ಎಂಬ ಹಂಬಲ ಹೊಂದಿದವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC Recruitment 2025) ದಲ್ಲಿ ಖಾಲಿ ಇರುವ 248 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅಕ್ಟೋಬರ್ 1ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಜ್ಯೂನಿಯರ್ ಎಂಜಿನಿಯರ್ ಇತ್ಯಾದಿ
ಒಟ್ಟು ಹುದ್ದೆಗಳು: 248
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 2
ಕೊನೆಯ ದಿನಾಂಕ: ಅಕ್ಟೋಬರ್ 1
ಸಹಾಯಕ ರಾಜಭಾಷಾ ಅಧಿಕಾರಿ ಹುದ್ದೆಗಳು 11, ಜೂನಿಯರ್ ಎಂಜಿನಿಯರ್ (ಸಿವಿಲ್) 109, ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) 46, ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) 49, ಜೂನಿಯರ್ ಎಂಜಿನಿಯರ್ 17, ಸೂಪರ್ವೈಸರ್ 1, ಸೀನಿಯರ್ ಅಕೌಂಟೆಂಟ್ 10 ಮತ್ತು ಹಿಂದಿ ಅನುವಾದಕ 5 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು https://www.nhpcindia.com/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಸಿಎ, ಸಿಎಂಎ, ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.



















