ಬೆಂಗಳೂರು: ಈಗಷ್ಟೇ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿ ಉದ್ಯೋಗ ಹುಡುಕುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 36 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL)
ಒಟ್ಟು ಹುದ್ದೆಗಳು: 36
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 15
ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್, ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಿಂದ ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ 18, ಜ್ಯೂನಿಯರ್ ಟೆಕ್ನಿಕಲ್ ಮ್ಯಾನೇಜರ್ 18 ಹುದ್ದೆಗಳು ಖಾಲಿ ಇವೆ. ಇಡಬ್ಲ್ಯೂಎಸ್, ಒಬಿಸಿ ಸಮುದಾಯದವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸುವವರು nhsrcl.in. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.