ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ ಮಾತ್ರವಲ್ಲದೇ, ಕಿರುಕುಳ ನೀಡಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು ಠಾಣೆಗೆ ಕರೆದು ಮಾತನಾಡಿ ಪ್ರಕರಣವನ್ನು ಇತ್ಯರ್ಥಪಡಿಸಿ ಕಳುಹಿಸಿದ್ದರು.



















