ಚಿತ್ರದುರ್ಗ: ಇ.ಡಿ ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ಮತ್ತೆ ದಾಳಿ ನಡಸಿದ್ದಾರೆ.
ವೀರೇಂದ್ರ ಪಪ್ಪಿಯವರ ಹೇಳಿಕೆಯನ್ನು ಆಧರಿಸಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಆರು ಐಷಾರಾಮಿ ಕಾರುಗಳು, ವಿದೇಶಿ ಕರೆನ್ಸಿ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಹಾಗೂ ಪಪ್ಪಿ ಅವರ ಬ್ಯಾಂಕ್ ಖಾತೆಗಳ ವಹಿವಾಟಿನ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಲಾಗಿದೆ.


















