ಬೆಂಗಳೂರು : ಟ್ರಾಫಿಕ್ ಫೈನ್ ಕಟ್ಟಲು ಶೇ.50ರಷ್ಟು ರಿಯಾಯಿತಿ ನೀಡಿದ್ದಕ್ಕೆ ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ.
ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು. ಅದರ ಬೆನ್ನಲ್ಲೇ ಬಾಕಿಯಿದ್ದ 12,70,950 ಪ್ರಕರಣಗಳ ದಂಡ ಪಾವತಿಯಾಗಿದ್ದು. ಈವರೆಗೂ 35.72 ಕೋಟಿ ರೂ. ಸಂಗ್ರಹವಾಗಿದೆ.
ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಣೆ ಮಾಡಿ ಭಾರೀ ಮೊತ್ತದ ದಂಡ ಸಂಗ್ರಹಿಸಿತ್ತು.



















