ಬೆಂಗಳೂರು: ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆಯ್ಕೆಯಾಗಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.
ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರದ ಮೂಲಕವೇ ನಡೆಸುವುದಕ್ಕೆ ಸಚಿವ ಸಂಪುಟ ಸಭೆ ನಿರ್ಧರಿಸುವುದಕ್ಕೆ ಸಂಬಂಧಿಸಿದಂತೆ ತಮ್ಮ ಅಧಿಕೃತ ʼಎಕ್ಸ್ʼ ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ ವಿಜಯೇಂದ್ರ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಿ, ಮತಪತ್ರ ಬಳಸಿ ಮತ್ತೆ ಚುನಾವಣೆ ಮಾಡಿ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.