ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ 1,425 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಫೀಸ್ ಅಸಿಸ್ಟಂಟ್, ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಗ್ರಾಮೀಣ ಬ್ಯಾಂಕ್
ಒಟ್ಟು ಹುದ್ದೆಗಳ ಸಂಖ್ಯೆ: 1,425
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 21
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ ಎಂದು ನಿಗದಿಪಡಿಸಲಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಯಾವ ಹುದ್ದೆ ಎಷ್ಟು ಖಾಲಿ?
- ಆಫೀಸ್ ಅಸಿಸ್ಟಂಟ್ (ಕ್ಲರ್ಕ್)-800 ಹುದ್ದೆ
ವಿದ್ಯಾರ್ಹತೆ: ಪದವಿ
-ಆಫೀಸರ್ ಸ್ಕೇಲ್-I (ಅಸಿಸ್ಟಂಟ್ ಮ್ಯಾನೇಜರ್)-500 ಹುದ್ದೆ
ವಿದ್ಯಾರ್ಹತೆ: ಪದವಿ
-ಆಫೀಸರ್ ಸ್ಕೇಲ್-II (ಮ್ಯಾನೇಜರ್) 150 ಹುದ್ದೆ
ವಿದ್ಯಾರ್ಹತೆ: ಸಿಎ, ಪದವಿ, ಎಲ್ಎಲ್ ಬಿ, ಎಂಬಿಎ
ಅರ್ಜಿ ಶುಲ್ಕವಾಗಿ ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು 850 ರೂ. ಮತ್ತು ಎಸ್ ಸಿ, ಎಸ್ ಟಿ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 175 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪ್ರಿಲಿಮಿನರಿ ಪರೀಕ್ಷೆ, ಮೇನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. https://karnatakagrameenabank.com/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.