ಬೀದರ್: ಖಾಸಗಿ ಶಾಲಾ ಬಸ್ (School Bus) ಹರಿದ ಪರಿಣಾಮ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಎಕ್ಕಂಬಾ ಎಂಬಲ್ಲಿ ನಡೆದಿದೆ. ಕಾವೇರಿ ಆಕಾಶ್ ಸಾವನ್ನಪ್ಪಿರುವ ಬಾಲಕಿ ಎನ್ನಲಾಗಿದೆ. ವಿದ್ಯಾರ್ಥಿನಿ ಶಾಲೆಯ ಬಸ್‌ನಿಂದ ಕೆಳಗೆ ಇಳಿಯುತ್ತಿದ್ದಾಗ ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ಅಡಿ ಸಿಲುಕಿ ಸಾವನ್ನಪ್ಪಿದ್ದಾಳೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



















