ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಹತ್ತಿರ ನಡೆದಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನವದ ವ್ಯಾಪ್ತಿಯಲ್ಲಿ ಇರುವ ಗುಲಗಂಜಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಉಪನದಿಗೆ ಉರುಳಿ ಬಿದ್ದಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಸುತಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.