ಚಾಮರಾಜನಗರ: ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಅಪ್ರಾಪ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿ, ಕಾರು ಹಾಗೂ ಮೊಪೆಡ್ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೊಪೆಡ್ ನಲ್ಲಿ ನಾಲ್ವರು ಅಪ್ರಾಪ್ತರು ತೆರಳುತ್ತಿದ್ದರು ಎನ್ನಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಮೆರಾನ್ ಎಂಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಎಂಬ ಬಾಲಕರನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮೂವರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಚಾಮರಾಜನಗರ (Chamarajanagar) ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.