ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಗೃಹ ಸಚಿವರು ಒಪ್ಪಿಕೊಂಡಿದ್ದಾರೆ. ಕಿಡಿಗೇಡಿಗಳು ಮಾಡಿರುವ ದುಷ್ಕೃತ್ಯದಿಂದಾಗಿ ಇಡೀ ಮದ್ದೂರು ಪಟ್ಟಣದಲ್ಲಿ ಶಾಂತಿ ಹದಗೆಟ್ಟಿದೆ. ಕಿಡಿಗೇಡಿಗಳಿಂದಾಗಿ ಶಾಂತಿ ಇಲ್ಲದಂತಾಗಿದೆ. ಈಗ ಇಡೀ ಪಟ್ಟಣವೇ ಉದ್ವಿಗ್ನಗೊಂಡಿದೆ. ಫ್ರೀ ಪ್ಲಾನ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.
ನಮಗೆ ಕೂಡ ಪೂರ್ವ ನಿಯೋಜಿತ ಕೃತ್ಯ ಎಂಬ ಮಾಹಿತಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ. ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಅನ್ನೋ ಮಾಹಿತಿ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ.



















