ಬೆಳ್ತಂಗಡಿ : ‘ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನಲ್ಲಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಸೌಜನ್ಯಳ ಮಾವ ವಿಠಲ ಗೌಡ ಅವರ ಹೆಸರನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಸೌಜನ್ಯಳ ಮೇಲೆ ಆಕೆಯ ಮಾವ ವಿಠಲ ಗೌಡನಿಗೆ ದೈಹಿಕ ಬಯಕೆ ಇತ್ತು. ಆತನೇ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದಾನೆ ಎಂದು ದಾಖಲೆಗಳನ್ನು ನೋಡಿದಾಗ ತಿಳಿದು ಬರುತರ್ತದೆ. ಆತನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಬೇಕು ಎಂದು ಆರೋಪಿಸಿದ್ದಾರೆ.
ಮಾತ್ರವಲ್ಲದೇ, ಲೈಂಗಿಕ ದೌರ್ಜನ್ಯ ನಡೆಸಿ ಸೌಜನ್ಯಾಳನ್ನು ಕೊಲೆ ಮಾಡಿರುವ ನೈಜ ಆರೋಪಿಗೆ ಶಿಕ್ಷೆಆಗಬೇಕು. ಆ ಕಾರಣಕ್ಕಾಗಿ ದೂರಿನಲ್ಲಿ ಹೆಸರಿಸಿರುವ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ.


















