ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ವಿಶ್ವವಿದ್ಯಾಲಯ
ಹುದ್ದೆಗಳ ಸಂಖ್ಯೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 14
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 17
ಪಿಎಚ್.ಡಿ, ನೆಟ್, ಎಸ್ ಎಲ್ ಇ ಟಿಯಲ್ಲಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಹತೆ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://bangaloreuniversity.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ಗೆಸ್ಟ್ ಲೆಕ್ಚರರ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆಯನ್ನು ಸರಿಯಾಗಿ ಓದಬೇಕು
ಬಳಿಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು