ಬೆಂಗಳೂರು: ದೇಶದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIM) ಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿಗಾತಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CAT 2025) ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ. ಹಾಗಾಗಿ, ಯಾರೆಲ್ಲ ಪ್ರಮುಖ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಗಳಲ್ಲಿ ಎಂಬಿಎ ಸೇರಿ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯಬೇಕು ಎಂತಿದ್ದೀರೋ, ಅವರೆಲ್ಲರೂ ಕ್ಯಾಟ್ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ನವೆಂಬರ್ 30ರಂದು ಕ್ಯಾಟ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ನವೆಂಬರ್ 5ರಿಂದ 30ರೊಳಗೆ ಹಾಲ್ ಟಿಕೆಟ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ದೇಶದ 170 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಐದು ಪರೀಕ್ಷಾ ಕೇಂದ್ರಗಳನ್ನು ನೀಡಬೇಕು. ಇವುಗಳಲ್ಲಿ ಒಂದು ಪರೀಕ್ಷಾ ಕೇಂದ್ರವನ್ನು ನೀಡಲಾಗುತ್ತದೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಅಧಿಕೃತ ವೆಬ್ ಸೈಟ್ ಆಗಿರುವ iimcat.ac.inಗೆ ಭೇಟಿ ನೀಡಬೇಕು
ಲಾಗಿನ್ ಖಾತೆ ಇಲ್ಲದಿದ್ದರೆ ಹೊಸ ಖಾತೆ ರಚಿಸಬೇಕು
ಹೆಸರು, ಹುಟ್ಟಿದ ದಿನಾಂಕ, ಫೋನ್ ಸಂಖ್ಯೆ, ಇಮೇಲ್ ವಿಳಾಸ ಮುಂತಾದ ನಿಮ್ಮ ವೈಯಕ್ತಿಕ ಮಾಹಿತಿ ಒದಗಿಸಿ
ವೈಯಕ್ತಿಕ ವಿವರಗಳನ್ನು ನಮೂದಿಸಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಶುಲ್ಕ ಪಾವತಿಸಿದ ಬಳಿಕ ಅರ್ಜಿ ಸಲ್ಲಿಸಿ
ದೇಶದಲ್ಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಅಹ್ಮದಾಬಾದ್, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಬೆಂಗಳೂರು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಕಲ್ಲಿಕೋಟೆ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ದಿಲ್ಲಿ ಸಂಸ್ಥೆಗಳು ದೇಶದ ಟಾಪ್ 4 ಮ್ಯಾನೇಜ್ ಮೆಂಟ್ ಸಂಸ್ಥೆಗಳಾಗಿವೆ.