ಬೆಂಗಳೂರು : ರಾಜ್ಯ ಸರ್ಕಾರದ ಒಳ ಮೀಸಲಾತಿ ವರ್ಗೀಕರಣವನ್ನು ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಪರಿಶಿಷ್ಟ ಜಾತಿಗಳ ಮೀಸಲಾತಿ ಅವೈಜ್ಞಾನಿಕ ವರ್ಗೀಕರಣ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬಂಜಾರ, ಭೋವಿ , ಕೊರವ, ಕೊರಚ ಸಮುದಾಯದವರು ಕೂಡ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ಒಳ ಮೀಸಲಾತಿಯಿಂದ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರ ಹಾಕಿದೆ.
ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಪ್ರತಿಭಟನಾಕರರು ಸೇರಿದ್ದು, ಕುಡುಚಿ ಮಾಜಿ ಶಾಸಕ ಪಿ ರಾಜೀವ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಸರ್ಕಾರ ಒಳ ಮೀಸಲಾತಿ ಯಲ್ಲಿ 64 ಜಾತಿಗಳನ್ನು ಸೇರಿಸಿ 5 ರಷ್ಟು ಮೀಸಲಾತಿ ನೀಡಿರುವ ಹಿನ್ನೆಲೆಯಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಈ ಸಮುದಾಯಗಳಿಗೆ ಶೇ. 5 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಹಾಲಿ ಹಾಗೂ ಮಾಜಿ ಶಾಸಕರು ಭಾಗಿ ಆಗಿದ್ದಾರೆ.
59 ಇತರೆ ಜಾತಿಗಳನ್ನು ಸೇರಿ ಬಂಜಾರು ಮತ್ತು ಕೊರಮ ಕೊರಚ ಬೋವಿ ಸಮುದಾಯಗಳಿಗೆ ಅನ್ಯಾಯವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಬಂದು ಅನ್ಯಾಯವನ್ನು ಸರಿದೂಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು, ಪ್ರತಿಭಟನಾಕಾರರು ತಲೆ ಬೋಳಿಸಿಕೊಳ್ಳುವುದರ ಮೂಲಕ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು.



















