ಪ್ಯಾರಿಸ್ : ನೇಪಾಳದ ಬಳಿಕ ಫ್ರಾನ್ಸ್‌ನಲ್ಲಿ ಈಗ ಸರ್ಕಾರದ ವಿರುದ್ಧ ಜನರ ಆಕ್ರೋಶ ಕಟ್ಟೆಯೊಡೆದಿದೆ. ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ರಸ್ತೆ ತಡೆದು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ. ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಸುಮಾರು 200 ಮಂದಿಯನ್ನು ಬಂಧಿಸಿರುವುದಾಗಿ ಫ್ರಾನ್ಸ್‌ನ ಗೃಹ ಸಚಿವರು ತಿಳಿಸಿದ್ದಾರೆ.
ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಮ್ಯಾಕ್ರನ್ ಸರ್ಕಾರ ಜನಜೀವನ ಮಟ್ಟ ಸುಧಾರಿಸುವಲ್ಲಿ ವಿಫಲವಾಗಿದೆ, ಹಣಕಾಸು ನಿರ್ವಹಣೆ ತುಂಬಾ ಕಳಪೆಯಾಗಿದೆ ಎಂದು ಜನ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.
ಪ್ರತಿಭಟನೆ ಹತ್ತಿಕ್ಕಲು ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಪರಿಸ್ಥಿತಿ ಕೈಮೀರಿದ್ದು, ವಿವಿಧೆಡೆ ಪೊಲೀಸರು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ.



















