ಆನೇಕಲ್ : ಪುರಾತನ ಮುನೇಶ್ವರ ಸ್ವಾಮಿಯ ವಿಗ್ರಹ ದ್ವಂಸ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನಾ ಅಗ್ರಹಾರದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪೂಜೆ ಸಲ್ಲಿಸುವುದಕ್ಕೆ ಭಕ್ತರು ತೆರಳಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಗ್ರಾಮಸ್ಥರ ಆರಾಧ್ಯ ದೈವವಾಗಿರುವ ಮುನೇಶ್ವರ ಸ್ವಾಮಿ ವಿಗ್ರಹವನ್ನು ದ್ವಂಸ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ. ಸದ್ಯ ಬೊಮ್ಮನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















