ಬೆಂಗಳೂರು: ದೇಶದ ಪ್ರಮುಖ ಹಣಕಾಸು ಸೇವೆಗಳ ಪೂರೈಕೆದಾರ ಕಂಪನಿಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನಲ್ಲಿ (Canara Bank Securities Recruitment 2025) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೇಲ್ಸ್ ಹಾಗೂ ಮಾರ್ಕೆಟಿಂಗ್ ವಿಭಾಗದಲ್ಲಿ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತರು ಹಾಗೂ ಅರ್ಹರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 6
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸುವವರು ಅರ್ಹರಾಗಿದ್ದಾರೆ. ಕನಿಷ್ಠ 20ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಅಧಿಕೃತ ವೆಬ್ಸೈಟ್ http://canmoney.in/ಗೆ ಭೇಟಿ ನೀಡಬೇಕು.
Canara Bank Securities ವಿಭಾಗ ಆಯ್ಕೆಮಾಡಿಕೊಳ್ಳಬೇಕು.
ಟ್ರೈನಿ ಹುದ್ದೆಯ ಅಧಿಸೂಚನೆ ಓದಿ, ದಾಖಲೆ ಸಿದ್ಧಪಡಿಸಿಕೊಳ್ಳಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು