ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿರ್ಲಕ್ಷ್ಯದಿಂದ ಶಾಲಾ ಮಕ್ಕಳ ವಾಹನ ಮೋರಿಗೆ ಇಳಿದಿರುವ ಘಟನೆ ಔಟರ್ ರಿಂಗ್ ರಸ್ತೆಯ ಬೆಳಗೆರೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನ್ಯೂ ಹಾರಿಝನ್ ಇಂಡಿಯಾ ಶಿಕ್ಷಣ ಸಂಸ್ಥೆಯ ವಾಹನ ಡ್ರೈನೇಜ್ ಗೆ ಇಳಿದ ದೃಶ್ಯ ಕಾರ್ ಡ್ಯಾಶ್ ಕ್ಯಾಮಾರಾದಲ್ಲಿ ಸೆರೆಯಾಗಿದೆ.
ಮೋರಿಯಲ್ಲಿ ನೀರು ನಿಂತು ರಸ್ತೆ ಯಾವುದು ಮೋರಿ ಯಾವುದು ಎಂದು ಗೊತ್ತಾಗದೆ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಸಮಸ್ಯೆಗಳಾಗಿಲ್ಲ. ಮಳೆಗಾಲದಲ್ಲಿ ರಸ್ತೆಗಳನ್ನು ಸೂಕ್ತ ನಿರ್ವಹಣೆ ಮಾಡದೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.