ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನ ಜಾಮೀನು ಅರ್ಜಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಸೆ. 16ಕ್ಕೆ ಕಾಯ್ದಿರಿಸಿದೆ.
ಈ ನಡುವೆ ಎಸ್‌ಐಟಿ ಅಧಿಕಾರಿಗಳು ಜಾಮೀನು ನೀಡದಂತೆ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದ್ದರು. ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್. ಅವರು ತೀರ್ಪನ್ನು ಕಾಯ್ದಿರಿಸಿ ಆದೇಶಿಸಿದ್ದಾರೆ.